Select Page

Advertisement

ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ಇರಲಿ : ಗೃಹ ಸಚಿವ ಪರಮೇಶ್ವರ

ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ಇರಲಿ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದಕ್ಕೆ ಆಸ್ಪದ ಮಾಡಿಕೊಟ್ಟಿದ್ದು, ಈ ಕೊಲೆ ಪ್ರೀತಿ ವಿಚಾರಕ್ಕೆ ಆಗಿದೆ ಅಂತ ಒಂದು ವರ್ಗದವರು ವಾದಿಸಿದರೆ, ಇನ್ನೂ ಕೆಲವರು ಲವ್​ ಜಿಹಾದ್​ಗೆ ವಿರೋಧಿಸಿದಕ್ಕೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟದ ಸದಸ್ಯರು ನೀಡುತ್ತಿರುವ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಗುರಿಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಪರಮೇಶ್ವರ್, ನನ್ನ ಬಳಿ ಇದ್ದ ಮಾಹಿತಿ ಆಧರಿಸಿ ನಾನು ಹೇಳಿಕೆ ನೀಡಿದ್ದೆ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತನಿಖೆ ನಡೆಯುತ್ತಿದೆ ಮತ್ತು ಅದು ಪೂರ್ತಿಗೊಂಡ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದು, ಎಬಿವಿಪಿ ಅವರಿಗೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಕೊರತೆ ಇರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಾನಾಗಲೀ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಲೀ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು, ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗಲ್ಲ ಎಂದಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!