ನೇಹಾ ಹಿರೇಮಠ ಸಾವಿಗೆ ಮಿಡಿದ ಮನವಳ್ಳಿ ಹೃದಯಗಳು
ಬೆಳಗಾವಿ : ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಿಂದೆ ಲವ್ ಜಿಹಾದ್ ಇದ್ದು ಪ್ರಕರಣದ ಹಿಂದೆ ಇನ್ನೂ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಶನಿವಾರ ಸವದತ್ತಿ ತಾಲೂಕಿನ ಮನವಳ್ಳಿ ಪಟ್ಟಣದಲ್ಲಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಇವರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಹತ್ಯೆ ಅತ್ಯಂತ ಅಮಾನುಷ ಘಟನೆ.
ಇದರಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇನ್ನೂ ಈ ಘಟನೆ ಕುರಿತು ನೊಂದ ಕುಟುಂಬಕ್ಕೆ ಸಾಂತ್ವನ ಹೇಳಬೇಕಿದ್ದ ಸಿಎಂ ಹಾಗೂ ಗೃಹ ಸಚಿವರು ದ್ವಂದ್ವ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದರು.
ವಿದ್ಯಾರ್ಥಿನಿ ಹತ್ಯೆ ಮಾಡಿದ್ದ ಆರೋಪಿ ಬೆಳಗಾವಿಯ ಮನವಳ್ಳಿ ಪಟ್ಟಣವನಾಗಿದ್ದು ಈ ಘಟನೆ ಖಂಡಿಸಿ ಮೂರು ದಿನಗಳ ವರೆಗೆ ಪ್ರತಿಭಟನೆ ಹಮ್ಮಿಕೊಂಡಿರುವ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಂದ್ ಆಚರಣೆ ಮಾಡಿದ್ದಾರೆ.
ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.


