Select Page

ಕಳ್ಳತನ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ; ಖಾಕಿ ಮೇಲೆ ಶಾಸಕ ನಿಖಿಲ್ ಕತ್ತಿ ಅನುಮಾನ

ಕಳ್ಳತನ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ; ಖಾಕಿ ಮೇಲೆ ಶಾಸಕ ನಿಖಿಲ್ ಕತ್ತಿ ಅನುಮಾನ

ಹುಕ್ಕೇರಿ : ತಾಲೂಕಿನ ಕಣಗಲಾ ಗ್ರಾಮ ಸೇರಿದಂತೆ ವಿವಿಧೆಡೆ ಕಳ್ಳರ ಹಾವಳಿ ಹೆಚ್ಚಾಗಿದ್ದು ಪೋಲಿಸ್ ಅಧಿಕಾರಿಗಳು ವಿಫಲರಾಗಿದ್ದು, ಕಳ್ಳತನ ‌ಪ್ರಕರಣದ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದು ಅನುಮಾನಕ್ಕೆ ಕಾರಣವಾಗಿದೆ ಎಂದು ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ಅಧಿಕಾರಿಗಳ ವಿರುದ್ಧ ‌ಆಕ್ರೋಶ ಹೊರಹಾಕಿದರು.

ಮಂಗಳವಾರ ತಾಲೂಕಾ ಪಂಚಾಯತ ಸಭಾಭವನದಲ್ಲಿ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದ ಇವರು.
ಸಂಕೇಶ್ವರ ಸಿಪಿಐ ಅವರಿಗೆ ಅಧಿಕಾರಿಗಳ ಸಭೆಗೆ ಹಾಜರಾಗುವಂತೆ ತಿಳಿಸಿದರು ನಿರ್ಲಕ್ಷ್ಯ ವಹಿಸಿದ್ದಾರೆ. ಜನರ ಸಮಸ್ಯೆಗೆ ಪರಿಹಾರ ನೀಡಬೇಕಾದ ಅಧಿಕಾರಿಗಳ ಈ ರೀತಿಯ ವರ್ತನೆ ಸರಿಯಲ್ಲ. ಈ ಕುರಿತು ಅಧಿಕಾರಿಗಳು ಬದಲಾಗದಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಶಾಸಕರು ಆಕ್ರೋಶ ಹೊರಹಾಕಿದರು.

ತೋಟಗಳಲ್ಲಿ ವಾಸವಾಗಿರುವ ಮನೆಗಳ ಸರ್ವೇ ಮಾಡಿ ಅವುಗಳನ್ನು ಈ ಸತ್ವದಡಿ ಅಳವಡಿಸಿ ಇದರಿಂದ ಪುರಸಭೆಗಳ ಹಾಗೂ ಗ್ರಾ.ಪಂ. ಆರ್ಥಿಕ ಅಭಿವೃದ್ಧಿ ಸಹಕಾರಿ ಆಗುತ್ತದೆ.
ತಾಲೂಕಿನಲ್ಲಿ ಈಗಾಗಲೇ 14 ಡೆಂಗ್ಯೂ ಪ್ರಕರಣಗಳು ವರಿದಯಾಗಿದ್ದು ರೋಗ ನಿಯಂತ್ರಣಕ್ಕೆ ನೀರಿನ ಟ್ಯಾಂಕ್ ಚರಂಡಿ ಸ್ವಚ್ಛಗೋಳಿಸಬೇಕು. ಡೆಂಗ್ಯೂ ರೋಗ ಹರಡುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಜನರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆಯಲ್ಲಿ ತಾಲೂಕಿನ‌ ನದಿಗಳಲ್ಲಿ ಪ್ರವಾಹ ಭೀತಿ ಎದುರಾಗುವ ಸಾಧ್ಯತೆ ಇದ್ದು ಈ ಕುರಿತು ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವುದು.
ಹಿರಣ್ಯಕೇಶಿ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜನರಿಗೆ ತಿಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.‌ ಈ ಸಂದರ್ಭದಲ್ಲಿ ತಹಶೀಲ್ದಾರ ಮಂಜುಳಾ ನಾಯಿಕ, ಸಿಪಿಐ ಮಹಾಂತೇಶ ಬಸ್ಸಾಪೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!