ನಿರ್ಮಲಾ ಸೀತಾರಾಮನ್ ವಿರುದ್ಧ FIR ಗೆ ತಡೆ : ಕಾಂಗ್ರೆಸ್ ಗೆ ಮುಖಭಂಗ
ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪದ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ದಾಖಲಿಸಿದ್ದ FIR ಗೆ ತಾತ್ಕಾಲಿಕ ತಡೆ ನೀಡಿ ಹೈಕೋರ್ಟ್ ವಿಚಾರಣೆಯನ್ನು ಮುಂದಕ್ಕೆ ಹಾಕಿದೆ.
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಜೆ.ಪಿ ನಡ್ಡಾ, ರಾಜ್ಯದ ನಳೀನ್ ಕುಮಾರ್ ಕಟೀಲ್ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಹಾಕಲಾಗಿದ್ದ FIR ರದ್ದು ಮಾಡುವಂತೆ ಬಿಜೆಪಿ ಐಟಿ ಸೆಲ್ ನಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.
ಸೋಮವಾರ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಆಕ್ಟೋಬರ್. 22 ಕ್ಕೆ ಮುಂದೂಡಿದೆ. ಪೀಠದ ಆದೇಶ ಆಕ್ಷೇಪಣೆ ಸಲ್ಲಿಸುವವರೆಗೆ ತನಿಖೆಗೆ ಮಧ್ಯಂತರ ತಡೆ ನೀಡಲಾಗಿದೆ.
ಏನಿದು ಪ್ರಕರಣ : ಚುನಾವಣಾ ಬಾಂಡ್ ಗಳ ಮೂಲಕ ಬೆದರಿಸಿ ಹಣ ಸುಲಿಗೆ ಮಾಡಲಾಗಿದೆ. ಇದೇ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಆರೋಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜನಾಧಿಕಾರ ಸಂಘರ್ಷ ಪರಿಷತ್ ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.
ಈ ಕುರಿತು ವಿಚಾರಣೆ ಮಾಡಿರುವ ಕೋರ್ಟ್ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು ಮಾಡುವಂತೆ ತಿಲಕ ನಗರ ಪೊಲೀಸರರುಗೆ ಸೂಚನೆ ನೀಡಿತ್ತು. ಜೊತೆಗೆ ಮುಂದಿನ ವಿಚಾರಣೆಯನ್ನು ಅ.10 ಕ್ಕೆ ಕೋರ್ಟ್ ಮುಂದೂಡಿತ್ತು.