ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ..!
ಬೆಳಗಾವಿ : ಜನಸ್ನೇಹಿ ಅಧಿಕಾರಿ ಎಂದೇ ಹೆಸರು ಪಡೆದುರುವ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಬೆಳಗಾವಿ ವಿಭಾಗದ ಪ್ರಾದೇಶಿಕ ಅಧಿಕಾರಿಯಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಎಂ.ಜಿ ಹಿರೇಮಠ ಅವರ ನಿವೃತ್ತಿ ನಂತರ ಹಿರಿತನ ಆಧಾರದ ಮೇಲೆ ಬಾಗಲಕೋಟೆ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಅವರು ಪ್ರಭಾರ ವಹಿಸಿಕೊಂಡಿದ್ದರು. ಇದೀಗ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದರಿಂದ ಬೆಳಗಾವಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರಿಗೆ ಪ್ರಭಾರ ವಹಿಸಿದೆ