ಜಿಲ್ಲೆಯಾದ್ಯಂತ ಜಾನುವಾರು ಸಂತೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಬೆಳಗಾವಿ : ಜಾನುವಾರುಗಳಲ್ಲಿ ಚರ್ಮ ಗಂಟು ರೋಗದ ಲಕ್ಷಣ ಅಲ್ಪ ಪ್ರಮಾಣದಲ್ಲಿ ಕಂಡುಬಂದ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಜಾನುವಾರು ಸಂತೆ/ ಜಾತ್ರೆ / ಸಾಗಾಣಿಕೆ ಹಾಗೂ ಪ್ರದರ್ಶನ ನಡೆಸದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊತಡಿಸಿದ್ದು, ಬೆಳಗಾವಿ ಜಿಲ್ಲೆಯ. ಮೂಡಲಗಿ, ಗೋಕಾಕ್, ಅಥಣಿ, ಕಾಗವಾಡ, ಚಿಕ್ಕೋಡಿ, ನಿಪ್ಪಾಣಿ, ರಾಯಬಾಗ ಪ್ರದೇಶದಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡ ಕಾರಣ ಮುಂಜಾಗ್ರತಾ ಕ್ರಮವಾಗಿ ಜಾನುವಾರು ಸಂತೆ ನಡೆಸದಂತೆ ಆದೇಶ ಹೊರಡಿಸಿದ್ದಾರೆ.
ಸಪ್ಟೆಂಬರ್ 16 ರಿಂದ ಮುಂದಿನ ಆದೇಶದವರೆಗೆ ಯಾವುದೇ ರೀತಿಯಲ್ಲಿ ಜಾನುವಾರು ಸಂತೆ ಸೇರಿದಂತೆ ಕೆಲವನ್ನು ನಿಬಂಧನೆ ವಿಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹಿರಡಿಸಿದ್ದಾರೆ.