ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ವರ್ಗಾವಣೆ
ಬೆಳಗಾವಿ : ಕಳೆದ ಎರಡು ವರ್ಷಗಳಿಂದ ಬೆಳಗಾವಿ ಜಿಲ್ಲಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದ ನಿತೇಶ್ ಪಾಟೀಲ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನಿತೇಶ್ ಪಾಟೀಲ್ ಅವರಿಂದ ತೆರವಾದ ಸ್ಥಾನಕ್ಕೆ ಮಹಮ್ಮದ್ ರೋಷನ್ ಅಚರನ್ನು ನೇಮಕ ಮಾಡಲಾಗಿದೆ.
ಕಳೆದ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಸೇರಿದಂತೆ ಕಠಿಣ ಪರಿಸ್ಥಿತಿಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರ ಕಾರ್ಯವೈಖರಿಗೆ ಜನ ಮೆಚ್ಚುಗೆ ಹೊಂದಿದ್ದರು.