
ಚಂದನ್ ಹಾಗೂ ನಿವೇದಿತಾ ದಾಂಪತ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಯಾರು….?

ಬೆಂಗಳೂರು : ಕಳೆದ ನಾಲ್ಕು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಟಿಕ್ ಟಾಕ್ ಸ್ಟಾರ್ ನಿವೇದಿತಾ ಗೌಡ ಹಾಗೂ ಗಾಯಕ ಚಂದನ್ ಶೆಟ್ಟಿ ನಡುವಿನ ವೈವಾಹಿಕ ಜೀವನಕ್ಕೆ ಬ್ರೇಕ್ ಬಿದ್ದಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡ ನಿವೇದಿತಾ ಗೌಡ ಅವರು ಚಂದನ್ ಶೆಟ್ಟಿ ಜೊತೆಗಿನ ವೈವಾಹಿಕ ಬದುಕನ್ನು ಅಂತ್ಯಗೊಳಿಸುವುದಾಗಿ ಹಾಗೂ ಕಾನೂನು ಬದ್ಧವಾಗಿ ಕೊಣೆಗೊಳಿಸುವುದಾಗಿ ಬರೆದುಕೊಂಡಿದ್ದಾರೆ.
ಈ ದಿನ ಚಂದನ್ ಶೆಟ್ಟಿ ಹಾಗೂ ನಾನು ನಮ್ಮ ದಾಂಪತ್ಯ ಜೀವನವನ್ನು ಕಾನೂನು ಬದ್ಧವಾಗಿ ಕೊನೆಗೊಳಿಸಲು ನಿರ್ಧರಿಸಿದ್ದೇವೆ. ನಾವು ಪರಸ್ಪರ ಒಪ್ಪಿ ಈ ನಿರ್ಧಾರಕ್ಕೆ ಬಂದಿದ್ದು, ನಮ್ಮ ಖಾಸಗಿತನವನ್ನು ಗೌರವಿಸಲು ಕೇಳಿಕೊಳ್ಳುತ್ತೇವೆ. ಪ್ರತಿ ಸಲ ನಮ್ಮೊಂದಿಗೆ ನಿಂತವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಸಧ್ಯ ಚಂದನ್ ಜಾಗೂ ನಿವೇದಿತಾ ನಡುವಿನ ದಾಂಪತ್ಯ ಜೀವನ ಹಾಳಾಗಲು ಒಬ್ಬರು ಕಾರಣರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಕೂಡಾ ಖ್ಯಾನ ನಟರಾದ ಕಾರಣ ನಿವೇದಿತಾ ಹಾಗೂ ಅವರ ನಡುವಿನ ಸಂಬಂಧಕ್ಕೆ ಈ ಕಾರಣ ಇರಬಹುದು ಎಂದು ಹೇಳಲಾಗುತ್ತಿದೆ.
ಇನ್ನೂ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಒಬ್ಬ ನಟನ ಜೊತೆ ನಿವೇದಿತಾ ಇರುವ ಪೋಟೋ ಹಾಗೂ ವೀಡಿಯೋ ವೈರಲ್ ಆಗುತ್ತಿದ್ದು ಈ ಕುರಿತು ಯಾರೂ ಬಹಿರಂಗ ಹೇಳಿಕೆ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
Nivedita gowda Chandan Shetty Sandalwood Kannada Film Industry