Select Page

ಸರ್ಕಾರದ ವಿರುದ್ಧ ತಿರುಗಿಬಿದ್ದ ಕೂಡಲಸಂಗಮ ಶ್ರೀ ; ಟ್ರ್ಯಾಕ್ಟರ್ ರ್ಯಾಲಿ ಮೂಲಕ ಸುವರ್ಣಸೌಧ ಮುತ್ತಿಗೆಗೆ ಕರೆ

ಸರ್ಕಾರದ ವಿರುದ್ಧ ತಿರುಗಿಬಿದ್ದ ಕೂಡಲಸಂಗಮ ಶ್ರೀ ; ಟ್ರ್ಯಾಕ್ಟರ್ ರ್ಯಾಲಿ ಮೂಲಕ ಸುವರ್ಣಸೌಧ ಮುತ್ತಿಗೆಗೆ ಕರೆ

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕಲ್ಪಿಸುವ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ಕರೆದಿದ್ದ ಸಭೆ ವಿಫಲವಾಗಿದ್ದು ಡಿಸೆಂಬರ್ 9 ಕ್ಕೆ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕುವಂತೆ ಕೂಡಲಸಂಗಮ ಬಸವ ಜಯಮೃತ್ಯುಂಜಯ ಶ್ರೀ ಕರೆ ಕೊಟ್ಟಿದ್ದಾರೆ.

ಸಿಎಂ ಜೊತೆ ನಡೆದ ಸಭೆ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಇವರು. ಈಗಾಗಲೇ ಏನು ತೀರ್ಮಾಣ ಕೈಗೊಳ್ಳುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಮತ್ತೆ ಪಂಚಮಸಾಲಿ ಸಮುದಾಯದ ಮುಖಂಡರು ಹೋರಾಟ ಮುಂದುವರಿಸುವ ನಿರ್ಧಾರ ಮಾಡಿರುವುದಾಗಿ ಸ್ವಾಮೀಜಿ ಹೇಳಿದ್ದಾರೆ.

ಚಳಿಗಾಲದ ಅಧಿವೇಶನಕ್ಕೂ ಮೊದಲು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಬರುವ ಡಿಸೆಂಬರ್ 9 ರಂದು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮೂಲಕ ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ಸಮಾಜದ ಮುಖಂಡರು ತೀರ್ಮಾಣ ಮಾಡಿರುವುದಾಗಿ ಸ್ವಾಮೀಜಿ ಹೇಳಿದರು.

Advertisement

Leave a reply

Your email address will not be published. Required fields are marked *

error: Content is protected !!