ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಒಗೆ ಕಿಸ್ ಕೊಟ್ಟ ಸದಸ್ಯ
ತುಮಕೂರು : ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒ ಮಹಿಳೆಗೆ ಅದೇ ಗ್ರಾಮ ಪಂಚಾಯತಿ ಸದಸ್ಯ ಕಿಸ್ ಕೊಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ ಎಂಬುವವರು ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಕೈ ಹಿಡಿದು ಚುಂಬಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೆ ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ.
ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಘಟನೆ ನಡೆದಿದ್ದು ತಳವಾಗಿ ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದೆ.