
Breaking-ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದ 7 ಜನ ಪಿಎಫ್ಐ ಸದಸ್ಯರು ಪೊಲೀಸ್ ವಶಕ್ಕೆ

ಬೆಳಗಾವಿ: ಪಿಎಫ್ಐ ಮುಖಂಡರ ಮೇಲಿನ ದಾಳಿ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದ ಏಳು ಜನ ಪಿಎಫ್ಐ ಮುಖಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮಹಾನಗ ಪೊಲೀಸ್ ಉಪ ಆಯುಕ್ತ (ಡಿಸಿಪಿ) ರವೀಂದ್ರ ಗಡಾದಿ ನೇತೃತ್ವದಲ್ಲಿ ಇಂದು ಬೆಳ್ಳಂಬೆಳಗ್ಗೆ 4ಗಂಟೆಗೆ ಪಿಎಫ್ಐ ಮುಖಂಡರ ಪಟ್ಟಿ ಮಾಡಿಕೊಂಡು ದಾಳಿ ನಡೆಸಿದ್ದಾರೆ. ಈ ವೇಳೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ಕಾರ್ಯಾಚರಣೆಯಲ್ಲಿ ಮಾರ್ಕೆಟ್ ಎಸಿಪಿಗಳಾದ ನಾರಾಯಣ ಭರಮಣಿ, ಸದಾಶಿವ ಕಟ್ಟಿಮನಿ, ಎಪಿಎಂಸಿ, ಟಿಳಕವಾಡಿ, ಮಾಳಮಾರುತಿ ಠಾಣೆಗಳ ಸಿಪಿಐಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಇತ್ತೀಚೆಗೆ ಎನ್ಐಎ ದಾಳಿ ಖಂಡಿಸಿ ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ ಕಟಗಿ ನೇತೃತ್ವದಲ್ಲಿ ಬೆಳಗಾವಿ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆ ಮಾಡಿದ್ದರು.
ಪಿಎಫ್ಐ ಕಾರ್ಯಕರ್ತ ಸಮೀವುಲ್ಲಾ, ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಜಖೀವುಲ್ಲಾ ಫೈಜಿ ಸೇರಿ ಏಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು. ಓರ್ವನಿಗೆ ಅನಾರೋಗ್ಯ ಹಿನ್ನೆಲೆ ವಶಕ್ಕೆ ಪಡೆಯದೇ ಕೇವಲ ವಿಚಾರಣೆ ಮಾಡಲಾಗಿದೆ.