
ಪವನಕುಮಾರ ಕೆ. ಅವರಿಗೆ ಪಿಹೆಚ್.ಡಿ. ಪ್ರದಾನ

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿರುವ ಪವನಕುಮಾರ ಕೆ. ಅವರು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಮಹಿಳಾ ನಾಯಕತ್ವ– ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಗಳ ತೌಲನಿಕ ಅಧ್ಯಯನ ಎಂಬ ವಿಷಯದ ಮೇಲೆ ರಾಜ್ಯಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಹೆಚ್.ಡಿ. ಪದವಿ ಪ್ರದಾನ ಮಾಡಿದೆ.
ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರಾದ ಪ್ರೊ. ಕಮಲಾಕ್ಷಿ ಗ. ತಡಸದ ಅವರು ಮಾರ್ಗದರ್ಶನ ಮಾಡಿದ್ದರು.