ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ
ಬೆಂಗಳೂರು : 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳೀನಕುಮಾರ ಕಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ.
ಈಗಾಗಲೇ ಕಳೆದ ಕೆಲ ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಅನೇಕ ಚರ್ಚೆಗಳು ವ್ಯಕ್ತವಾಗುತ್ತಿದ್ದವು. ಜೊತೆಗೆ ಸಿದ್ದರಾಮಯ್ಯ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಕೂಡಾ ಮುಂದಿನ ತಿಂಗಳ ಮೊದಲವಾರದಲ್ಲೇ ಇರುವ ಹಿನ್ನಲೆಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಯ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆ ಜೋರಾಗಿದೆ.
ಈ ಎಲ್ಲಾ ಬೆಳವಣಿಗೆ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳೀನಕುಮಾರ ಕಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ನನ್ನ ಅಧಿಕಾರ ಅವಧಿ ಮುಕ್ತಾಯವಾದ ಕಾರಣ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

