ಪೊಲೀಸ್ ಕಾನ್ಸಟೇಬಲ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಗಮನಿಸಿ….!
ಬೆಳಗಾವಿ : ದಿನಾಂಕ: 24.10.2021 ರವಿವಾರ,ದಂದು ರಾಜ್ಯಾದ್ಯಂತ ನಡೆಯುವ ಪೋಲಿಸ್ ಕಾನ್ಸಟೇಬಲ್ (ಸಿವಿಲ್) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ಹಾಗೂ ಮರಳಿ ಸ್ವ-ಸ್ಥಳಗಳಿಗೆ ಹಿಂದಿರುಗಲು.
ದಿನಾಂಕ: 23.10.2021 ಮತ್ತು 24.10.2021 ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ, ಪರೀಕ್ಷೆಗಳು ನಡೆಯುವ ಕೇಂದ್ರಗಳಾದ ಕಾರವಾರ, ಉಡುಪಿ, ಮಂಗಳೂರು, ಮೂಡಬಿದ್ರೆ, ಕಾರವಾರ, ಹಾಗೂ ಇನ್ನಿತರ ಜಿಲ್ಲಾ ಕೇಂದ್ರಗಳಿಗೆ ಅವಶ್ಯಕತೆ ಹಾಗೂ ಬೇಡಿಕೆಗಳಿಗನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮುಂಗಡ ಟಿಕೇಟ್‌ಗಳನ್ನು ksrtc mobile app ಅಥವಾ ksrtc.karnataka.gov.in ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಸುಗಮ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿಯೇ, ಪ್ರಯಾಣಿಸುವಂತೆ ಮತ್ತು ಸದರಿ ವಿಶೇಷ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.