“ಗೋ ಪ್ರೇಮಿ” ಪೊಲೀಸ್ ಅಧಿಕಾರಿ ಮಹಮ್ಮದ್ ಹೃದಯಾಘಾತದಿಂದ ನಿಧನ
ಬೆಂಗಳೂರು : ಸ್ನೇಹ ಜೀವಿ ಹಾಗೂ ಗೋ ಪ್ರೇಮಿಯಾಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.
ಬೆಂಗಳೂರಿನ ಠಾಣೆ ಒಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಮಹಮ್ಮದ್ ರಫೀಕ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಹಿಂದೆ ಖಾಸಗಿ ಚಾನಲ್ ಒಂದರಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಹಾಡಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದರು.
ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಗೋವುಗಳಿಗೆ ಮೇವು ಹಾಕುವ ಮೂಲಕ ಮಾನವೀಯತೆ ಮೆರೆದಿದ್ದ ರಫೀಕ್ ತಾವೇ ಒಂದು ಕರುವನ್ನು ಸಾಕಿದ್ದರು. ಬೇರೆ ಠಾಣೆಗೆ ವರ್ಗಾವಣೆಯಾದ ಸಂದರ್ಭದಲ್ಲಿ ಕರವನ್ನು ತಮ್ಮ ಜೊತೆ ಕೊಂಡೊಯ್ದಿದ್ದರು. ಪೊಲೀಸ್ ಅಧಿಕಾರಿ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ.