ಕುವೆಂಪು ಆಶಯದ ಮಂತ್ರ ಮಾಂಗಲ್ಯ ಪದ್ಧತಿಯಂತೆ ವಿವಾಹವಾದ ನಟಿ ಪೂಜಾ ಗಾಂಧಿ
ಬೆಂಗಳೂರು : ಕನ್ನಡದ ಖ್ಯಾತ ನಟಿ ಸರಳ ವಿವಾಹದ ಮೂಲಕ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಗರದ ಖಾಸಗಿ ರೆಸಾರ್ಟ್ ನಲ್ಲಿ ವಿಜಯ್ ಘೋರ್ಪಡೆ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿ ವಿಶೇಷವಾಗಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ವಿವಾಹವಾಗಿದ್ದಾರೆ.
ಮೂಲತಃ ಉತ್ತರ ಪ್ರದೇಶ ಮೂಲದ ಪೂಜಾ ಗಾಂಧಿ ಅವರು ಕನ್ನಡದಲ್ಲಿ 50 ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದು, ಕನ್ನಡಿಗರ ಹೃದಯ ಗೆದ್ದ ನಟಿ ಎಂದೇ ಖ್ಯಾತಿ ಪಡೆದಿದ್ದಾರೆ.
ನಟ ಗಣೇಶ ಅಭಿನಯದ ಮುಂಗಾರು ಮಳೆ ಚಿತ್ರದ ಮೂಲಕ ಕನ್ನಡದಲ್ಲಿ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು.