ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಆಗಿದ್ದು, ಜೀವಾವಧಿ ಶಿಕ್ಷೆ ಜೊತೆ ಐದು ಲಕ್ಷ ದಂಡ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಜನಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ಗಜಾನನ ಭಟ್ ಅವರು ಆರೋಪಿ ಹಾಗೂ ಸರಕಾರದ ಪರ ವಕೀಲರ ವಾದ ಪರಿಗಣಿಸಿ ಜೀವಾವಧಿ ಶಿಕ್ಷೆ ನೀಡಿ ಶನಿವಾರ ಆದೇಶ ಹೊರಡಿಸಿದ್ದಾರೆ.