ಸಂಸದ ಪ್ರತಾಪ್ ಸಿಂಹ ಅವರ ಸಹೋದರ ಅರೆಸ್ಟ್
ಮೈಸೂರು : ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಹಾಸನ ಜಿಲ್ಲೆ ಬೈಲೂರು ತಾಲೂಕಿನ ನಂದಗೊಂಡನಹಳ್ಳಿಯ ಜಮೀನಿನಲ್ಲಿದ್ದ ಸುಮಾರು 50 ವರ್ಷಕ್ಕೂ ಹಳೆಯದಾದ 126 ಮರಗಳನ್ನು ಕಡಿದಿರುವ ಆರೋಪದ ಮೇಲೆ ಸಂಸದ ಪ್ರತಾಪ್ ಸಿಂಹ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಹಾಸನ) ಪ್ರಭುಗೌಡ ಬಿರಾದಾರ್ ಮತ್ತು ಎಸಿಪಿ (ಕ್ರೈಂ ಸೆಲ್) ಬೆಂಗಳೂರು ನೇತೃತ್ವದ ಜಂಟಿ ತಂಡವು ವಿಕ್ರಮ್ ಸಿಂಹನನ್ನು ಬೆಂಗಳೂರಿನಲ್ಲಿ ಬಂಧಿಸಿದೆ.
ಈ ಕುರಿತು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ನನ್ನ ರಾಜಕೀಯ ಭವಿಷ್ಯ ಅಂತ್ಯಗೊಳಿಸಲು ಕುಟುಂಬ ಬಲಿ ಕೊಡಲು ಮುಂದಾಗಿದ್ದಾರೆ. ಸಿಎಂ ತಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ಈ ರೀತಿಯ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


