Select Page

Advertisement

ಸಂಸದ ಪ್ರತಾಪ್ ಸಿಂಹ ಗೆ ಮೈಸೂರು ಲೋಕಸಭಾ ಟಿಕೆಟ್ ಮಿಸ್..?

ಸಂಸದ ಪ್ರತಾಪ್ ಸಿಂಹ ಗೆ ಮೈಸೂರು ಲೋಕಸಭಾ ಟಿಕೆಟ್ ಮಿಸ್..?

ಬೆಂಗಳೂರು : ಮೈಸೂರು ಕೊಡಗು ಲೋಕಸಭಾ ಸದಸ್ಯ ಹಾಗೂ ಕ್ರಿಯಾಶೀಲ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಲೋಕಸಭಾ ಟಿಕೆಟ್ ಮಿಸ್ ಆಗುತ್ತದೆ ಎಂಬ ಮಾತು ಜೋರಾಗಿದೆ.

ಹೌದು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಂದು ಯಶಸ್ವಿಯಾಗಿ ಲೋಕಾರ್ಪಣೆ ಮಾಡಿದ್ದ ಬಿಜೆಪಿ ಸಂಸದರ ಕಾರ್ಯವೈಖರಿಗೆ ಇಡೀ ರಾಜ್ಯವೇ ಪಕ್ಷ ಭೇದ ಮರೆತು ಹೊಗಳುತ್ತದೆ.

ಆದರೆ ಬಿಜೆಪಿ ಪಕ್ಷದ ಆಂತರಿಕ ಜಗಳದಿಂದ ಈ ಬಾರಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬ ಮಾತು ಜೋರಾಗಿದೆ. ಈಗಾಗಲೇ ರಾಜ್ಯದಿಂದ ಮೈಸೂರು ಕ್ಷೇತ್ರದಿಂದ ಇಬ್ಬರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಕಳುಹಿಸಲಾಗಿದೆ.

ಪ್ರತಾಪ್ ಸಿಂಹ ಹೆಸರಿನ ಜೊತೆ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಅವರ ಹೆಸರನ್ನು ಕೂಡಾ ಬಿಜೆಪಿ ರಾಜ್ಯ ನಾಯಕರು ಕಳುಹಿಸಿದ್ದಾರೆ. ಈ ಕಾರಣದಿಂದ ಮೈಸೂರು ಲೋಕಸಭಾ ಚುನಾವಣಾ ಕಣ ರಂಗು ಪಡೆದಿದೆ.

ಪ್ರತಾಪ್ ಸಿಂಹ ಅವರಿಗೆ ಮೈಸೂರು ಲೋಕಸಭಾ ಟಿಕೆಟ್ ನೀಡಲು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರೋಧ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಸಂಸತ್ ನಲ್ಲಿ ಸ್ಮೋಕ್ ಬಾಂಬ್ ಪ್ರಕರಣದಲ್ಲಿ ಆರೋಪಿತರಿಗೆ ಪಾಸ್ ಕೊಟ್ಟ ಸಂಸದ ಪ್ರತಾಪ್ ಸಿಂಹ ಅವರಿಗೆ ಮುಳುವಾಗಿ ಪರಿಣಮಿಸಿದೆ.

ಪ್ರತಾಪ್ ಸಿಂಹ ಪ್ರತಿಕ್ರಿಯೆ

ನಾನು ಮೈಸೂರು-ಕೊಡಗು ಕ್ಷೇತ್ರ ಗೆದ್ದರೆ ಸಿಎಂ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಕುಟುಕಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರನ್ನು ಸೋಲಿಸಲು ಆಗಲ್ಲ ಅಂತ ಕಾಂಗ್ರೆಸ್‌ ನಾಯಕರಿಗೂ ಗೊತ್ತಿದೆ.

ಹೀಗಿರುವಾಗ ಕಾಂಗ್ರೆಸ್‌ಗೆ ನಮ್ಮ ಪಕ್ಷ ಹೇಗೆ ಸಪೋರ್ಟ್ ಮಾಡುತ್ತೆ ಎಂದು ಚಾಟಿ ಬೀಸಿದರು. ಜನರಿಗೆ ರೂಲರ್ ಬೇಡ, ಬೇಕಿರೋದು ಕೆಲಸಗಾರ. ಪತ್ರಕರ್ತನಾಗಿದ್ದವನನ್ನು ಎರಡು ಬಾರಿ ಎಂಪಿ ಮಾಡಿದ್ದು ಬಿಜೆಪಿ. ಕಾಂಗ್ರೆಸ್ ಅವರಿಗೆ ಅಭ್ಯರ್ಥಿ ಹುಡುಕಲು ಆಗ್ತಾ ಇಲ್ಲ. ಇದರಿಂದ ಪ್ರತಾಪ್ ಸಿಂಹ ಶಕ್ತಿ ಏನು ಅಂತ ಕಾಂಗ್ರೆಸ್ ಅವರಿಗೆ ಗೊತ್ತಿದೆ. ನಾನು ಗೆದ್ದರೆ ಸಿದ್ದರಾಮಯ್ಯ ಅವರ ಕುರ್ಚಿ ಅಲ್ಲಾಡುತ್ತೆ ಎಂದು ಹೇಳಿದರು.

ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ. 10 ವರ್ಷ ನಿಯತ್ತಾಗಿ ಕೆಲಸ ಮಾಡಿದ್ದೇನೆ. ಪ್ರೀತಿಸುವವರು ಅಷ್ಟೇ ಪ್ರಮಾಣದಲ್ಲಿ ಇದಾರೆ. ರಾಜಕೀಯದಲ್ಲಿ ದ್ವೇಷ ಅಸೂಯೆ ಇದ್ದೆ ಇರುತ್ತೆ. ಚಾಲೆಂಜ್ ಮಾಡಿ ಹೇಳ್ತೀನಿ ನನ್ನ ರೀತಿ ಕೆಲಸ ಯಾರು ಮಾಡಿಲ್ಲ. ಮೈಸೂರು ಕೊಡಗು ಜನರ ಪ್ರೀತಿಯ ನಡುವೆ ಅಸೂಯೆ ಯಾವುದು ನಿಲ್ಲಲ್ಲ. ಪಾರ್ಟಿಯ ಕಾರ್ಯಕರ್ತರು ಯಾರು ಅಭ್ಯರ್ಥಿ ಆಗಬೇಕೆಂದು ಹೇಳಿದ್ದಾರೆ. ಅದರ ಶೀಟ್ ನೋಡಿದ್ರೆ ಗೊತ್ತಾಗುತ್ತೆ ಎಂದು ತಿಳಿಸಿದರು.

Advertisement

Leave a reply

Your email address will not be published. Required fields are marked *

error: Content is protected !!