ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ : ಶುರುವಾಯಿತು ರಾಜೀನಾಮೆ ಪರ್ವ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ ಬರ್ಬರ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಾರಿ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ.
ಯುವಕನ ಬರ್ಬರ ಹತ್ಯೆ ಹಾಗೂ ಮತಾಂದರ ಅಟ್ಟಹಾಸದ ವಿರುದ್ಧ ಸಾಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಸರ್ಕಾರ ರಕ್ಷಣೆ ಮಾಡುತ್ತಿಲ್ಲ ಎಂದು ಆರೋಪ ವ್ಯಕ್ತವಾಗಿದೆ. ಜೊತೆಗೆ ಸ್ವ ಪಕ್ಷದ ಸದಸ್ಯರಿಂದ ಆಕ್ರೋಶ ವ್ಯಕ್ತವಾಗಿದೆ.
ಸಧ್ಯ ಬಿಜೆಪಿ ಯುವ ಮೋರ್ಚಾ ಸೇರಿದಂತೆ ಅನೇಕ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಪ್ರಮುಖರು ರಾಜೀನಾಮೆ ನೀಡುತ್ತಿದ್ದಾರೆ. ಇದು ಸಧ್ಯ ತೀವ್ರ ಸ್ವರೂಪ ಪಡೆದುಕೊಂಡಿದೆ. ಈಗಾಗಲೇ ಅನೇಕ ಜಿಲ್ಲೆಯ ಪ್ರಮುಖರು ರಾಜೀನಾಮೆ ನೀಡಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.