
ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅಸ್ವಸ್ಥ ; ಆಸ್ಪತ್ರೆಗೆ ದಾಖಲು

ಹೈದರಾಬಾದ್ : 1986ನೇ ಬ್ಯಾಚ್ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ, ಕರ್ನಾಟಕದ ಮಾಜಿ ಡಿಜಿ-ಐಜಿ ಪ್ರಸ್ತುತ ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಹಠಾತ್ ಅಸ್ವಸ್ಥಗೊಂಡು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೂದ್, ಶ್ರೀಶೈಲದಿಂದ ಹೈದರಾಬಾದ್‌ಗೆ ವಾಪಸಾಗುತ್ತಿದ್ದಾಗ ಅವರ ಆರೋಗ್ಯದಲ್ಲಿ ದಿಢೀರನೇ ಏರುಪೇರು ಉಂಟಾಯಿತು. ತಕ್ಷಣವೇ ಅವರನ್ನು ಜ್ಯುಬಿಲಿ ಹಿಲ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
‘ಸೂದ್ ಅವರನ್ನು ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಒಂದು ದಿನದವರೆಗೆ ನಿಗಾದಲ್ಲಿಡಲಾಗಿದೆ’ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.