ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ; ಸರಳತೆ ಮೆರೆದ ಸಾಹುಕಾರ್
ಬೆಳಗಾವಿ : ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಪ್ರಿಯಾಂಕಾ ಜಾರಕಿಹೊಳಿ ಗುರುವಾರ ಅತ್ಯಂತ ಸರಳವಾಗಿ ನಸಮಪತ್ರ ಸಲ್ಲಿಸಿದರು.
ಪ್ರಿಯಾಂಕಾ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತಂದೆ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾರ್ಯಕರ್ತರು ಬರುವುದು ಬೇಡ ಎಂಬ ಮನವಿ ಮಾಡಿದ್ದ ಸತೀಶ್ ಜಾರಕಿಹೊಳಿ ಮಾತಿಗೆ ಬೆಲೆ ಕೊಟ್ಟು ಅಭಿಮಾನಿಗಳು ಆಗಮಿಸಿರಲಿಲ್ಲ. ಆದರೆ ಆಪ್ತ ವಲಯದ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಮ್ಮ ವಿಭಿನ್ನ ಚಿಂತನೆಗಳ ಮೂಲಕ ಜನಸಾಮಾನ್ಯರ ಗಮನಸೆಳೆಯುವ ಸತೀಶ್ ಜಾರಕಿಹೊಳಿ ಅವರು ತಮ್ಮದೇ ವಿಶಿಷ್ಠ ರಾಜಕೀಯ ಬದ್ಧತೆ ಉಳಿಸಿಕೊಂಡು ಬಂದಿದ್ದಾರೆ. ಈ ಬಾರಿ ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಅಭಿಪ್ರಾಯಪಟ್ಟರು.


