Select Page

Advertisement

ಗುತ್ತಿಗೆದಾರ ಆತ್ಮಹತ್ಯೆ ; ಪ್ರಿಯಾಂಕ್ ಖರ್ಗೆ ರಾಜೀನಾಮೆ….?

ಗುತ್ತಿಗೆದಾರ ಆತ್ಮಹತ್ಯೆ ; ಪ್ರಿಯಾಂಕ್ ಖರ್ಗೆ ರಾಜೀನಾಮೆ….?

ಬೀದರ್ : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಧ್ಯ ರಾಜಕೀಯ ತಿರುವು ಪಡೆದಿದ್ದು, ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಆಪ್ತರ ಹೆಸರಿದ್ದು ಕೂಡಲೇ ಸಚಿವಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಬಿಜೆಪಿ ಆಗ್ರಹಿಸಿದೆ.

ಗುತ್ತಿಗೆದಾರ ಸಚಿನ್ ಪಾಂಚಾಳ ಅವರಿಂದ ಹಣ ಪಡೆದು ವಂಚನೆ ಮಾಡಿದ್ದಲ್ಲದೆ ಹೆಚ್ಚಿನ ಹಣಕ್ಕೆ ಭೇಡಿಕೆ ಇಟ್ಟ ಆರೋಪದ ಹಿನ್ನಲೆಯಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ನನ್ನ ಸಾವಿಗೆ ಕಾರಣ ಎಂದು ಸಚಿನ್ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಅವರಿಗೆ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದು ದೇಹಲಿಗೆ ತೆರಳಲಿದ್ದಾರೆ. ಸ್ವತಃ ಪ್ರಿಯಾಂಕ್ ತಂದೆ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದು ಮಗನನ್ನು ಕರೆಯಿಸಿಕೊಂಡಿದ್ದಾರೆ.

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಕಾವು ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು ಬಿಜೆಪಿ ಬೃಹತ್ ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಕಳೆದ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಇನ್ನಿಲ್ಲದಂತೆ ಕಾಡಿದ್ದ ಪ್ರಿಯಾಂಕ್ ಪ್ರಕರಣವನ್ನು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುವಂತೆ ಬಿಜೆಪಿ ತಯಾರಿ ನಡೆಸಿದೆ.

Advertisement

Leave a reply

Your email address will not be published. Required fields are marked *

error: Content is protected !!