660 ಪಿಎಸ್ಐ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ
ಬೆಂಗಳೂರು : ಶೀಘ್ರದಲ್ಲೇ 660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ ನೀಡಿದರು.
ಕಳೆದ ವರ್ಷ ಪರೀಕ್ಷಾ ಹಗರಣದಿಂದ ತಡೆ ನೀಡಲಾಗಿದ್ದ 545 ಹುದ್ದೆಗಳ ಮರು ಪರೀಕ್ಷೆಯನ್ನು ಇಲಾಖೆ ಯಶಸ್ವಿಯಾಗಿ ನಡೆಸಿದೆ. ಹಾಗೆಯೇ ಬರುವ 28 ರಂದು 403 ಹುದ್ದೆಗಳ ಪರೀಕ್ಷೆ ನಡೆಸಲಾಗುತ್ತಿದೆ. ಈ ನಡುವೆ 660 ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಗೃಹ ಇಲಾಖೆ ಸಜ್ಜಾಗಿದೆ.
ಈ ಕುರಿತು ಮಾಹಿತಿ ನೀಡಿದ ಸಚಿವರು. ಈಗಾಗಲೇ 660 ಹುದ್ದೆ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಬರುವ ಎರಡು ವರ್ಷಗಳಲ್ಲಿ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಒಟ್ಟಿನಲ್ಲಿ ಕಳೆದ ಕೆಲ ವರ್ಷಗಳಿಂದ ಸರ್ಕಾರಿ ನೌಕರಿಗೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಯುವಕರಿಗೆ ಸರ್ಕಾರದ ಈ ನಿರ್ಧಾರ ಮೊಗದಲ್ಲಿ ಸಂತಸ ಮೂಡಿಸಿದೆ.


