ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ; ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಕೇವಲ ಒಂದು ದಿನ ಬಾಕಿ ಇದ್ದು ಎಪ್ರಿಲ್ 8 ರಂದು ಮಧ್ಯಾಹ್ನ ಫಲಿತಾಂಶ ಪ್ರಕಟವಾಗಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ನಾಳೆ ಮಧ್ಯಾಹ್ನ 12:30ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
https://karresults.nic.in ಜಾಲತಾಣದಲ್ಲಿ ಮಧ್ಯಾಹ್ನ 1:30 ಗಂಟೆಯ ನಂತರ ಫಲಿತಾಂಶ ವೀಕ್ಷಿಸಬಹುದಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1ರಿಂದ ಮಾ.20ರ ವರೆಗೆ ನಡೆಸಲಾಗಿತ್ತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ.
ಈ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರದಂದು ಪ್ರಕಟನೆಯಲ್ಲಿ ತಿಳಿಸಿದೆ.


