Select Page

Advertisement

ಆರ್.ಕೆ ಪಾಟೀಲ ನಿಧನ ; ಸಚಿವೆ ಹೆಬ್ಬಾಳಕರ್ ಸಂತಾಪ

ಆರ್.ಕೆ ಪಾಟೀಲ ನಿಧನ ; ಸಚಿವೆ ಹೆಬ್ಬಾಳಕರ್ ಸಂತಾಪ

ಬೆಳಗಾವಿ : ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಹಾಗೂ ಬೆಳಗಾವಿ ಜಿಲ್ಲಾ ಅಧ್ಯಕ್ಷ ಆರ್.ಕೆ.ಪಾಟೀಲ (58) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ನಿಧನ ಹೊಂದಿದ್ದಾರೆ.

ಕೂಡಲಸಂಗಮ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ಸಂತಾಪ :

ಪಂಚಮಸಾಲಿ ಸಮಾಜದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿದ್ದ ಆರ್.ಕೆ.ಪಾಟೀಲ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದಿಂದಾಗಿ ಸಮಾಜಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬಕ್ಕೆ ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!