ವಿದ್ಯಾರ್ಥಿ ನಿಲಯಗಳಿಗೆ ಸಿಇಒ ರಾಹುಲ್ ಶಿಂಧೆ ಭೇಟಿ, ಪರಿಶೀಲನೆ
ಬೆಳಗಾವಿ : ನಗರದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಸೋಮವಾರ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಜಂ ನಗರದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ ಶಿವಬಸವ ನಗರದ ಮೆಟ್ರಿಕ್ ಪೂರ್ವ ಬಾಲಕರ ನಿಲಯಕ್ಕೆ ದಿಢೀರ್ ಭೇಟಿ ನೀಡಿ ಅಡುಗೆ ಕೋಣೆ, ಶೌಚಾಲಯ ಸೇರಿದಂತೆ ಕೊಠಡಿಗಳನ್ನು ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ನೀಡುವ ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮಾಹಿತಿ ಕಲೆಹಾಕಿದರು.
ಅಜಂ ನಗರದ ವಸತಿ ನಿಲಯದಲ್ಲಿ ಗಂಥಾಲಯ ಚಿಕ್ಕದಾಗಿದ್ದು ಮಕ್ಕಳಿಗೆ ಓದುವುದಕ್ಕೆ ತೊಂದರೆಯಾಗುವುದನ್ನು ಗಮನಿಸಿ ಗ್ರಂಥಾಲಯ ವಿಸ್ತೀರ್ಣ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಲಭ್ಯವಾಗುವ ಸೌಲಭ್ಯಗಳನ್ನು ನಿಯಮಾನುಸಾರ ವಿತರಣೆ ಮಾಡಬೇಕು ಎಂದು ಹಾಸ್ಟೆಲ್ ಸಿಬ್ಬಂದಿಗಳಿಗೆ ಖಡಕ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ವಸತಿ ನಿಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

