Select Page

Advertisement

ಕಾಂಗ್ರೆಸ್ ಗೆ ಬಿಗ್ ಶಾಕ್ :ಸಂಸತ್ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ

ಕಾಂಗ್ರೆಸ್ ಗೆ ಬಿಗ್ ಶಾಕ್ :ಸಂಸತ್ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಪೇಕ್ಷಾರ್ಹ ಪದ ಬಳಕೆ ಹಿನ್ನಲೆ ಗುಜರಾತ್ ಸೂರತ್ ಸೆಷನ್ಸ್ ಕೋರ್ಟ್ ಎರಡು ವರ್ಷಗಳ ಕಾಲ ಜೈಲುವಾಸ ಶಿಕ್ಷೆ ನೀಡಿತ್ತು. ಈ ಹಿನ್ನಲೆಯಲ್ಲಿ ಅವರ ಸಂಸತ್ ಸದಸ್ಯತ್ವ ರದ್ದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮಾನಹಾನಿ ಮಾಡಿದ್ದ ಆರೋಪದಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷ ಜೈಲುಶಿಕ್ಷೆ ವಿಧಿಸಿ ಗುಜರಾತ್ ಸೂರತ್ ನ್ಯಾಯಾಲಯ ಆದೇಶ ಹೊರಡಿಸಿತ್ತು. ಜನಪ್ರತಿನಿಧಿಗಳ ಕಾಯ್ದೆ 1951 ರ ಪ್ರಕಾರ ಅವರ ಸದಸ್ಯತ್ವ ಹನರ್ಹಗೊಳಿಸಲಾಗಿದೆ.

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ಗುಜರಾತ್‌ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. 

ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್‌ ಅವರು ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ  ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು. 

Advertisement

Leave a reply

Your email address will not be published. Required fields are marked *