
ಯುವ ನಾಯಕನಿಗೆ ಅದ್ಧೂರಿ ಸ್ವಾಗತ ; ಸಾಹುಕಾರ್ ಪರ ಜಯಘೋಷ

ಬೆಳಗಾವಿ : ನೂತನವಾಗಿ ರಾಜ್ಯ ಕಾಂಗ್ರೆಸ್ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೇಗೆ ಆಯ್ಕೆಯಾದ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿಗೆ ಸೋಮವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.
ನಗರದ ಕಾಂಗ್ರೆಸ್ ಭವನಕ್ಕೆ ಆಗಮಿಸಿದ ರಾಹುಲ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಹೂವಿನ ಸುರಿಮಳೆಗೈದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ
ನಾಯಕರ ಪರ ಜಯಘೋಷ ಮೊಳಗಿತ್ತು. ಆರತಿ ಎತ್ತಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ರಾಹುಲ್ ಜಾರಕಿಹೊಳಿ ಹಣೆಗೆ ಕುಂಕುಮ ನಾಮ ಇಟ್ಟು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಸಾಮಾಜಿಕ ಬದುಕಿನಲ್ಲಿ ಇರುವ ನಮಗೆ ಹೇಗೆ ರಾಜಕಾರಣ ಮಾಡಬೇಕು, ಜನರ ಸೇವೆಗೆ ಯಾವೆಲ್ಲ ರೀತಿಯಲ್ಲಿ ಪ್ರಾಮಾಣಿಕತೆಯಿಂದ ದುಡಿಯಬೇಕು ಎಂದು ತಙದೆಯವರಾದ ಸತೀಶ್ ಜಾರಕಿಹೊಳಿ ಅವರು ಹೇಳಿಕೊಟ್ಟಿದ್ದು ಅದರಂತೆ ನಾನು ನಡೆದುಕೊಳ್ಳುತ್ತೇನೆ ಎಂದರು.
ಈವರೆಗೂ ಜನರ ಸೇವೆ ಮಾಡುತ್ತಾ ಪಕ್ಷ ಸಂಘಟನೆ ಮಾಡಿದ್ದೇವೆ. ಈ ಬಾರಿ ಪಕ್ಷದ ಮುಖಂಡರು ಹಾಗೂ ನಮ್ಮ ಕಾರ್ಯಕರ್ತರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆಮಾಡಿದ್ದಾರೆ. ಅದರಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೂ ನೂತನವಾಗಿ ಪದಾಧಿಕಾರಿಗಳ ಆಯ್ಕೆ ಆಗಿದ್ದು ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.