ಚಿಕ್ಕ ವಯಸ್ಸಿನಲ್ಲಿ ದೊಡ್ಡ ಜವಾಬ್ದಾರಿ ; ಮಿಂಚುತ್ತಿರುವ ಸಾಹುಕಾರ್ ಕುಡಿ…!

ಬೆಳಗಾವಿ : ತಮ್ಮ ಸೌಮ್ಯ ವ್ಯಕ್ತಿತ್ವದಿಂದ ಜನರ ಪ್ರೀತಿಗೆ ಪಾತ್ರರಾದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಚಿಕ್ಕ ವಯಸ್ಸಿನಲ್ಲೇ ಮಹತ್ವದ ಜವಾಬ್ದಾರಿ ವಹಿಸಿಕೊಂಡಂತಾಗಿದೆ.
ಕೆಲ ದಿನಗಳ ಹಿಂದೆ ನಡೆದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಬೆಳಗಾವಿ ತಾಲೂಕು ಕ್ಷೇತ್ರದಿಂದ ಅವಿರೋಧ ಆಯ್ಕೆಯಾದ ರಾಹುಲ್ ಜಾರಕಿಹೊಳಿ ನಿರ್ದೇಶಕ ಹುದ್ದೆ ಪಡೆದುಕೊಂಡಿದ್ದರು.
ಸಧ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಚಿಕ್ಕ ವಯಸ್ಸಿನಲ್ಲೇ ಮಹತ್ವದ ಜವಾಬ್ದಾರಿ ವಹಿಸಿಕೊಂಡಂತಾಗಿದೆ. ಇದರಿಂದ ಡಿಸಿಸಿ ಬ್ಯಾಂಕ್ ಅಭಿವೃದ್ಧಿಗೆ ಸಾಕಷ್ಟು ಸಹಕಾರಿ ಆಗಲಿಗೆ ಎಂಬ ಮಾತು ಕೇಳಿಬರುತ್ತಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ರಾಹುಲ್ ಜಾರಕಿಹೊಳಿ ಅವರು. ಬೆಳಗಾವಿ ತಾಲ್ಲೂಕುಗಳಿಂದ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಲು ಕಾರಣೀಕರ್ತರಾದ ಸಂಘಗಳಿಗೆ ಕೃತಜ್ಞತೆ ಸೂಚಿಸಿದರು. ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ರೈತರ ಸೇವೆಯನ್ನು ಸಲ್ಲಿಸುತ್ತೇನೆ.
ಬ್ಯಾಂಕಿನಿಂದ ಸಿಗುವ ಯೋಜನೆಗಳನ್ನು ರೈತರಿಗೆ ನೀಡುತ್ತೇನೆ. ಈ ಮೂಲಕ ಸಹಕಾರಿ ಸಂಘಗಳ ಅಭಿವೃದ್ಧಿಗೆ ಬದ್ಧನಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.

