
ನಾಳೆ ಬೆಳಗಾವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮನ

ಬೆಳಗಾವಿ : ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ.
ಗುರುವಾರ ಖಾನಾಪುರ ತಾಲೂಕಿನ ನಂದಗಡದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಧ್ಯಾಹ್ನ 12 : 30 ಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಗೋ ಪೋಜೆ ಮೂಲಕ ಚಾಲನೆ ನೀಡಲಿದ್ದಾರೆ.
ಸಚಿವ ಗೋವಿಂದ ಕಾರಜೋಳ ನೇತೃತ್ವದ ತಂಡ ವಿಜಯ ಸಂಕಲ್ಪ ರಥಯಾತ್ರೆ ನೇತೃತ್ವದ ವಹಿಸಿದ್ದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ.