ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಅಂಗನವಾಡಿ

ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ‌.

ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಶಾಲೆಗೆ ತೆರಳಲು ಮಕ್ಕಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅಷ್ಟೇ ಅಲ್ಲದೆ ಬೆಳಗಾವಿ ನಗರದಲ್ಲಿ ಮಳೆ ಆರ್ಭಟ ಮುಂದುವರಿದ ಪರಿಣಾಮ ರಸ್ತೆಗಳು ಮಳೆಯಂತಾಗಿವೆ. ವಿದ್ಯುತ್ ಕಂಬ ಹಾಗೂ ಮರಗಳು ನೆಲಕ್ಕೆ ಉರುಳಿದ ಪರಿಣಾಮ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.