
ಸುರಪುರ ಉಪ ಚುನಾವಣೆ ; ಬಿಜೆಪಿಯಿಂದ ರಾಜುಗೌಡ ಕಣಕ್ಕೆ

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದಿಂದ ತೆರುವಾಗಿದ್ದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7ರಂದು ನಡೆಯಲಿದ್ದು, ಮಾಜಿ ಸಚಿವ ರಾಜುಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ದಿವಂಗತ ರಾಜಾ ವೆಂಕಟಪ್ಪನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಕಾಂಗ್ರೆಸ್ ಈಗಾಗಲೇ ಟಿಕೆಟ್ ಘೋಷಿಸಿದೆ.
ರಾಜಾ ವೆಂಕಟಪ್ಪ ನಾಯಕ ನಿಧನದಿಂದ ಕ್ಷೇತ್ರ ತೆರವಾಗಿದ್ದು, ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆಯ ಉಪಚುನಾವಣೆ ನಡೆಯಲಿದೆ.