ಹಿಂದೂ ಕಾರ್ಯಕರ್ತರಿಗೆ ಭಿಕ್ಷುಕ ಎಂದ ಕಾಗವಾಡ ಕಾಂಗ್ರೆಸ್ ಶಾಸಕ ಕಾಗೆ
ಚಿಕ್ಕೋಡಿ : ಪ್ರಧಾನಿ ನರೇಂದ್ರ ಮೋದಿ ಸಾವಿನ ಕುರಿತು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಕಾಂಗ್ರೆಸ್ ಶಾಸಕ ರಾಜು ಕಾಗೆ ಈಗ ಹಿಂದು ಕಾರ್ಯಕರ್ತರಿಗೆ ಬಿಕಾರ್ ಚೋಟ್ – ಭಿಕ್ಷುಕ ಪದ ಬಳಕೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡುವ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರಿಗೆ ಭಿಕ್ಷುಕ ಪದ ಬಳಕೆ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ವಿವಾದಾತ್ಮಕ ಹೇಳಿಕೆಯಿಂದಲೇ ಶಾಸಕ ರಾಜು ಕಾಗೆ ಗಮನಸೆಳೆದಿದ್ದಾರೆ.
ಮೊನ್ನೆಯಷ್ಟೇ ಕಾಂಗ್ರೆಸ್ ಗೆ ಮತ ನೀಡದಿದ್ದರೆ ವಿದ್ಯುತ್ ಕಡಿತ ಮಾಡುವುದಾಗಿ ಹೇಳಿಕೆ ನೀಡಿದ್ದರು. ಈ ಹೇಳಕೆಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಿತ್ತು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.
ಇನ್ನೂ ರಾಜು ಕಾಗೆ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಚಿವ ಸಿಟಿ ರವಿ ಆಕ್ರೋಶ ಹೊರಹಾಕಿದ್ದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಗೆ ಅಂತವರ ಮನಸ್ಥಿತಿ ಎಂತಹದು ಎಂದು ಅವರ ಮಾತಿನಿಂದ ತಿಳಿಯುತ್ತದೆ. ಇದು ಕಾಂಗ್ರೆಸ್ ಸರ್ಕಾರದ ದುಷ್ಟ ಮನಸ್ಥಿತಿ ಎಂದು ಆಕ್ರೋಶ ಹೊರಹಾಕಿದ್ದಾರ.


