
ರಾಮದುರ್ಗ : ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ಸಿಕ್ತು 1 ಕೋಟಿ 10 ಲಕ್ಷ

ರಾಮದುರ್ಗ : ಗ್ರಾಮ ಲೆಕ್ಕಾಧಿಕಾರಿ ದಾಖಲೆ ಇಲ್ಲದೆ ಕಾರಿನಲ್ಲಿ 1 ಕೋಟಿ 10 ಲಕ್ಷ ಹಣ ಸಾಗಿಸುತ್ತಿದ್ದ ಸಂದರ್ಭದಲ್ಲಿ ರಾಮದುರ್ಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶುಕ್ರವಾರ ಬೆಳಿಗ್ಗೆ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಢವಳೇಶ್ವರ ತನ್ನ ಕಾರಿನಲ್ಲಿ 1 ಕೋಟಿ 10 ಲಕ್ಷ ಹಣ ಸಾಗಿಸುತ್ತಿದ್ದ ಸಂದರ್ಭದಲ್ಲಿ
ಖಚಿತ ದಾಳಿ ನಡೆಸಿದ ರಾಮದುರ್ಗ ಪೊಲೀಸರು ಆರೋಪಿ ಬಳಿ ಇದ್ದ ಹಣ ವಶಕ್ಕೆ ಪಡೆದಿದ್ದಾರೆ.
ಆರೋಪಿ ರಾಮದುರ್ಗ ಮಾರ್ಗವಾಗಿ ಬಾಗಲಕೋಟೆಗೆ ಹಣ ಸಾಗಿಸುತ್ತಿದ್ದ. ಈ ಸಂದರ್ಭದಲ್ಲಿ ರಾಮದುರ್ಗ ತಾಲ್ಲೂಕಿನ ಹಲಗತ್ತಿ ಚೆಕ್ ಪೋಸ್ಟ್ ಹತ್ತಿರ ರಾಮದುರ್ಗ ಡಿವೈಎಸ್ಪಿ ಎಂ
ಪಾಂಡುರಂಗ ತಂಡ ದಾಳಿ ನಡೆಸಿದಾಗ ಆರೋಪಿ ಬಲೆಗೆ ಬಿದ್ದಿದ್ದಾನೆ. ತನ್ನ ಬಳಿ ಇದ್ದ ಹಣಕ್ಕೆ ಯಾವುದೇ ದಾಖಲೆ ನೀಡದ ಹಿನ್ನಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳಿಗೆ ಪ್ರಕರಣ ಹಸ್ತಾಂತರ ಮಾಡಿದ್ದಾರೆ.
ಹಣ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ