Select Page

ಸ್ವಪಕ್ಷದವರು ನನ್ನ ವಿರುದ್ಧ ಪ್ರಚಾರ ಮಾಡಿದ್ರೆ ಪಕ್ಷ ಕ್ರಮ ಕೈಗೊಳುತ್ತೆ ; ಯಾರಿಗೆ ಟಾಂಗ್ ಕೊಟ್ಟರು ಪಟ್ಟಣ

ಸ್ವಪಕ್ಷದವರು ನನ್ನ ವಿರುದ್ಧ ಪ್ರಚಾರ ಮಾಡಿದ್ರೆ ಪಕ್ಷ ಕ್ರಮ ಕೈಗೊಳುತ್ತೆ ; ಯಾರಿಗೆ ಟಾಂಗ್ ಕೊಟ್ಟರು ಪಟ್ಟಣ

ಬೆಳಗಾವಿ : ತಾಲೂಕಿನ ಜನರ ಒತ್ತಾಯದ ಮೇರೆಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಎದುರಿಸುತ್ತಿದ್ದೇನೆ.‌
ನಮ್ಮ ಪಕ್ಷದವರೇ ನನ್ನ ವಿರುದ್ಧ ಪ್ರಚಾರ ಮಾಡಿದರೆ ಪಕ್ಷವೇ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ಅಶೋಕ್ ಪಟ್ಟಣ ಹೇಳಿದರು.

ಗುರುವಾಗ ನಗರದ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಮಾತನಾಡಿದರು.
ನಾನು ಯಾರ ಬಣದಲ್ಲಿಯೂ ಗುರುತಿಸಿಕೊಂಡಿಲ್ಲ. ನನ್ನ ಕ್ಷೇತ್ರದ ರೈತರ ಒತ್ತಾಯದ ಮೇರೆಗೆ ಚುನಾವಣೆ ಸ್ಪರ್ಧೆ ಮಾಡಿದ್ದು ಗೆಲುವು ಸಾಧಿಸುವ ವಿಶ್ವಾಸ ಇದೇ ಎಂದರು.

ಬಣಗಳ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಸಿದ್ದರಾಮಯ್ಯ ಅವರ ಬಣ. ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕಾರಣದ ಕುರಿತು ಎಲ್ಲರಿಗೂ ಗೊತ್ತಿರುವ ವಿಷಯ.
ರೈತರ ಬೆಂಬಲದಿಂದ ನಾನು ಗೆಲುವು ಸಾಧಿಸುತ್ತೇನೆ ಎಂದು ರಾಮದುರ್ಗ ಕಾಂಗ್ರೆಸ್ ಶಾಸಕ ಹಾಗೂ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಅಭಿಪ್ರಾಯಪಟ್ಟರು.

Advertisement

Leave a reply

Your email address will not be published. Required fields are marked *

error: Content is protected !!