ಡಿಸಿಸಿ ಚುನಾವಣೆ ಸಂಭ್ರಮಾಚರಣೆ ವೇಳೆ ಹೃದಯಾಘಾತ ; ಪಿಕೆಪಿಎಸ್ ಸದಸ್ಯ ಸಾವು

ಬೆಳಗಾವಿ : ಡಿಸಿಸಿ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಮತದಾನ ಮಾಡಿದ್ದ ಪಿಕೆಪಿಎಸ್ ಸದಸ್ಯ ಸಂಜೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ರಾಮದುರ್ಗ ತಾಲೂಕಿನ ಕಮಕೇರಿ ನಿವಾಸಿ, ಪಿಕೆಪಿಎಸ್ ಸದಸ್ಯ ಹಾಗೂ ಶಾಸಕ ಅಶೋಕ್ ಪಟ್ಟಣ್ ಅವರ ಆಪ್ತ ಗಿರಿಯಪ್ಪ ಬಸಪ್ಪ ಗಂಟೋಟಿ (40) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದ ಒಂದು ವಾರದಿಂದಲೂ ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಹನುಮಂತಗೌಡ ಅವರು, ಭಾನುವಾರ ಫಲಿತಾಂಶದ ನಂತರ ನಡೆದ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


