BELAGAVI – ಭೀಕರ ರಸ್ತೆ ಅಪಘಾತ : ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು
ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಟಬಾಗಿ ಗ್ರಾಮದ ಲಕ್ಷ್ಮಿ ನಗರ ಕ್ರಾಸ್ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನೊಪ್ಪಿರುವ ಘಟನೆ ಜರುಗಿದೆ.
ಕೋಟಬಾಗಿ ಗ್ರಾಮದ ಬಾಳಪ್ಪ ಶಿವಪ್ಪ ಹುಬರಟ್ಟಿ (32) ಮೃತ ದುರ್ದೈವಿ. MH 22 H 6040 ಚೆಕ್ಕಡಿ ಜೋಡಿಸಿದ ಟ್ರ್ಯಾಕ್ಟರ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವನಿಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆ ಟ್ರ್ಯಾಕ್ಟರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.