VIDEO : ಬಸ್ ನಿಯಂತ್ರಣಾಧಿಕಾರಿ ಉದ್ಧಟತನ, ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕ
ರಾಮದುರ್ಗ : ಪ್ರಯಾಣಿಕರೊಬ್ಬರು ಬಸ್ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕ ಅಧಿಕಾರಿ ಮೇಲೆ ಹಲ್ಲೆ ಮಾಡಿರೋ ಆರೋಪವಿದೆ.
ಮೊದಲಿಗೆ ಬಸ್ ವಿಚಾರಣೆಯ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಅಧಿಕಾರಿ ಮತ್ತು ಪ್ರಯಾಣಿಕ ಒಬ್ಬರ ಮೇಲೆ ಒಬ್ಬರು ಹಲ್ಲೆ ಮಾಡಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ ಇಲಾಖೆ ಸಿಬ್ಬಂದಿಗಳು ಸೇರಿಕೊಂಡು ಪ್ರಯಾಣಿಕನಿಗೆ ಥಳಿಸಿ ಕೊಠಡಿಯಲ್ಲಿ ಕೂಡಿ ಹಾಕಿ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.