ಸಚಿವಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ; ಡಿಕೆ ಸರ್ಕಾರಕ್ಕೆ ಶಾಕ್..!
ಬೆಂಗಳೂರು : ಡಿ.ಕೆ ಶಿವಕುಮಾರ್ ಸಂಪುಟದ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿನ್ನೆಯಷ್ಟೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ನಗರಾಭಿವೃದ್ಧಿ ಖಾತೆ ಮೇಲೆ ಕಣ್ಣಿಟ್ಟಿದ್ದ ಇವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ.
ಇದರಿಂದ ಬೇಸತ್ತ ರಾಮಲಿಂಗಾರೆಡ್ಡಿ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದರಿಂದ ಪಕ್ಷಕ್ಕೆ ಸಾಕಷ್ಟು ಮುಜುಗರ ಆಗಿದೆ.
ರಾಜೀನಾಮೆ ಪತ್ರದಲ್ಲಿ ನನ್ನ ಆತ್ಮಸಾಕ್ಷಿಗೆ ವಿರುದ್ಧ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಉಲ್ಲೇಖ ಮಾಡುವ ಮೂಲಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.


