ಭವಿಷ್ಯದಲ್ಲಿ ಡಿಕೆಶಿಗೆ ಉನ್ನತ ಸ್ಥಾನ : ಶ್ರೀ ರಂಭಾಪುರಿ ಜಗದ್ಗುರು
ವಿಜಯಪುರ : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ, ಬೆಳೆಸುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಹಳ ಶ್ರಮಿಸಿದ್ದಾರೆ. ಇವರ ಪರಿಶ್ರಮದಿಂದಾಗಿ ಕಾಂಗ್ರೆಸ್ ಪಕ್ಷದ ಹೆಚ್ಚಿನ ಶಾಸಕರು ಆಯ್ಕೆಯಾಗಲು ಕಾರಣವಾಗಿದ್ದು, ಭವಿಷ್ಯದಲ್ಲಿ ಉನ್ನತ ಸ್ಥಾನ ಸಿಗಲಿದೆ ಎಂದು ವೀರಶೈವ ರಂಭಾಪುರಿ ಪೀಠದ ಜಗದ್ಗುರು ವೀರ ಸೋಮೇಶ್ವರ ಶ್ರೀಗಳು ಹೇಳಿದರು.
ಶನಿವಾರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಶಿವಕುಮಾರ್ ಅವರು ವೀರಶೈವ ಲಿಂಗಾಯತ ಸಮುದಾಯದ ಜೊತೆಗೂ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ.
ಇವರ ಪರಿಶ್ರಮದ ಫಲವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಆಯ್ಕೆಯಾಗಿ, ಅವರ ಅವಧಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.
ಶಿವಕುಮಾರ್ ಅವರ ಅನುಭವ ತಿರಸ್ಕಾರ ಮಾಡಲು ಸಾಧ್ಯವಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಅತ್ಯುನ್ನತ ಸ್ಥಾನ ಸಿಗಲಿದೆ. ರಾಜ್ಯದಲ್ಲಿ ಅತ್ಯುನ್ನತ ಸ್ಥಾನ ಎಂದರೆ ಅದು ಮುಖ್ಯಮಂತ್ರಿ ಸ್ಥಾನ.
ಹಾಗಂತ ಈಗಲೇ ಸಿಗುತ್ತೆ ಎಂದು ಹೇಳಲ್ಲ, ಭವಿಷ್ಯದ ದಿನಗಳಲ್ಲಿ ರಾಜ್ಯದ ಚುಕ್ಕಾಣಿ ಸಿಗಬಹುದಾದ ಅರ್ಹತೆ ಇದೆ ಎಂದು ಭವಿಷ್ಯ ನುಡಿದರು.ನಮಗಷ್ಟೇ ಅಲ್ಲ, ಬೇರೆಯವರ ಅಭಿಪ್ರಾಯವು ಇದೆ ಆಗಿದೆ. ಆದರೆ ಮುಂದೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದರು.


