ಸವದಿ ಕಾಂಗ್ರೆಸ್ ಸೇರುತ್ತಿದ್ದಂತೆ ಅಥಣಿಯಲ್ಲಿ ಸಾಹುಕಾರ್ ಆ್ಯಕ್ಟಿವ್
ಅಥಣಿ : ಅತ್ತ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಬೆಂಗಳೂರಿಗೆ ಲಕ್ಷ್ಮಣ ಸವದಿ ತೆರಳುತ್ತಿದ್ದರೆ, ಇತ್ತ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಥಣಿಯಲ್ಲಿ ಪುಲ್ ಆ್ಯಕ್ಟಿವ್ ಆಗಿದ್ದಾರೆ.
ಇಂದು ಅಥಣಿಯಲ್ಲಿ ಕಾರ್ಯಕರ್ತರ ಮನೆಯಲ್ಲಿ ಸಭೆ ನಡೆಸಿರುವ ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ ಬೆನ್ನಿಗೆ ನಿಂತಿದ್ದಾರೆ. ಹಲವು ಮುಖಂಡರ ಜೊತೆ ಸಭೆ ನಡೆಸಿದ್ದು ಅಥಣಿ ಕಣ ರಂಗೇರಿದೆ.
ಈಗಾಗಲೇ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಮುಖಂಡರ ಜೊತೆ ಮಾತುಕತೆ ನಡೆಸಿದ್ದು ಕಾಂಗ್ರೆಸ್ ಸೇರ್ಪಡೆ ಆಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ಸವದಿ ಅವರನ್ನು ಸೋಲಿಸುವ ಪಣ ತೊಟ್ಟಿರುವ ರಮೇಶ್ ಜಾರಕಿಹೊಳಿ ಅಥಣಿ ಭೇಟಿ ಮಹತ್ವ ಪಡೆದಿದೆ.