ಲಕ್ಷ್ಮಣ ಸವದಿ ಸ್ವ ಗ್ರಾಮದಲ್ಲಿ ರಮೇಶ್ ಜಾರಕಿಹೊಳಿಗೆ ಸಿಕ್ಕ ಸ್ವಾಗತ ಅದ್ಬುತ
ಅಥಣಿ : ಸವದಿ ಹುಟ್ಟುರಿನಲ್ಲಿ ಸಾಹುಕಾರ್ ಗೆ ಅದ್ಧೂರಿ ಸ್ವಾಗತ – ಅಥಣಿ ಶಾಸಕ ಹಾಗೂ ರಾಜಕೀಯ ಬದ್ಧ ಎದುರಾಳಿ ಲಕ್ಷ್ಮಣ ಸವದಿ ಹುಟ್ಟೂರಿನಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಗ್ರಾಮಸ್ಥರು ಭರ್ಜರಿ ಸ್ವಾಗತ ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು.
ನಂದಗಾಂವ ಗ್ರಾಮದಲ್ಲಿ ನಡೆದ ದಸರಾ ಉತ್ಸವದಲ್ಲಿ ಭಾಗವಹಿಸಲು ಆಗಮಿಸಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಪುಷ್ಪವೃಷ್ಟಿ ಮೂಲಕ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಸಾವಿರಾರು ಜನ ಸಾಹುಕಾರ್ ಪರ ಘೋಷಣೆ ಮೊಳಗಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಬಿಗಿ ಪೊಲೀಸ್ ಕಟ್ಟೆಚ್ಚರ ಕೈಗೊಂಡಿದ್ದರು.
ರಾಜಕೀಯ ಗುರು ಸಿಎಂ ಸಿದ್ದರಾಮಯ್ಯ ಕುರಿತು ಮಾತನಾಡಿದ ಇವರು. ಈ ಹಿಂದೆ ನಾನು ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನೇರವಾಗಿ ಮಾತನಾಡುವ ಸಿದ್ದರಾಮಯ್ಯ ಈಗಿಲ್ಲ. ಅವರನ್ನು ಯಾರೋ ಕಟ್ಟಿ ಹಾಕಿದಂತಿದೆ. ಸಿದ್ದರಾಮಯ್ಯ ಅವರಿಗೆ ಸ್ವತಂತ್ರವಾಗಿ ಅಧಿಕಾರ ನಡೆಸಲು ಬಿಡುತ್ತಿಲ್ಲ ಎಂದು ಆರೋಪಿಸಿದರು.
ಜಗದೀಶ್ ಶೆಟ್ಟರ್ ಭೇಟಿ ವಿಚಾರವಾಗಿ ಮಾತನಾಡಿದ ಇವರು. ಜಗದೀಶ್ ಶೆಟ್ಟರ್ ಅವರ ಜೊತೆ ನಮಗೆ ರಾಜಕೀಯ ಹೊರತಾಗಿ ಸ್ನೇಹ ಇದೆ. ನಾನು ಮೊನ್ನೆ ಶೆಟ್ಟರ್ ಅವರನ್ನು ಭೇಟಿ ಮಾಡಿರುವುದರಲ್ಲಿ ಯಾವುದೇ ರಾಜಕೀಯ ಇಲ್ಲ. ಒಂದು ಕ್ಷಣ ಕೂಡಾ ರಾಜಕೀಯ ಚರ್ಚೆ ಮಾಡಿಲ್ಲ ಎಂದರು.


