
ಮಹಾರಾಷ್ಟ್ರ ಮಾದರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ

ಬೆಳಗಾವಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಪರೇಷನ್ ಕಮಲದಿಂದ ಬೀಳಲ್ಲ. ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನದಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಬಹುದು ಎಂದು ಜಾರಕಿಹೊಳಿ ಭವಿಷ್ಯ ನುಡಿದರು.
ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಸುಳ್ಳು ಬರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ತಮ್ಮ ತಪ್ಪು ಮುಚ್ಚಿಹಾಕಲು ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡುತ್ತುದ್ದಾರೆ. ಕಾಂಗ್ರೆಸ್ ನಲ್ಲಿನ ಒಳ ಜಗಳದಿಂದ ಸರ್ಕಾರ ಪತನವಾಗುತ್ತದೆ ಎಂದರು.
ಆಪರೇಷನ್ ಕಮಲ ಕೇವಲ ಡಿಕೆಶಿ ಬಾಯಲ್ಲಿ ಬರುತ್ತಿದೆ. ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಸಹಿಸಲು ಆಗದ ಕಾರಣ ಡಿಕೆಶಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ.
ಆದರೆ ಸಿದ್ದರಾಮಯ್ಯ ಸರ್ಕಾರ ಪತನ ಆಗಬಾರದು ಎಂಬುದು ನಮ್ಮ ಆಶಯ ಇದೆ ಎಂದರು.