Select Page

Advertisement

ರಮೇಶ್ ಜಾರಕಿಹೊಳಿ ನಿವಾಸಕ್ಕೆ ಪೋಸ್ಟರ್ ಅಂಟಿಸಿ ಡಿಕೆಶಿ ಬೆಂಬಲಿಗರ ಆಕ್ರೋಶ

ರಮೇಶ್ ಜಾರಕಿಹೊಳಿ ನಿವಾಸಕ್ಕೆ ಪೋಸ್ಟರ್ ಅಂಟಿಸಿ ಡಿಕೆಶಿ ಬೆಂಬಲಿಗರ ಆಕ್ರೋಶ

ಬೆಂಗಳೂರು : ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದು ಅವರ ನಿವಾಸಕ್ಕೆ ಪೋಸ್ಟರ್ ಅಂಟಿಸಿದ್ದಾರೆ.

ನಿನ್ನೇ ಡಿಕೆಶಿ ವಿರುದ್ಧ ಕಿಡಿ ಕಾರಿದ್ದ ರಮೇಶ್ ಜಾರಕಿಹೊಳಿ ಅವರು ಶೀಘ್ರದಲ್ಲೇ ಡಿಸಿಎಂ ತಮ್ಮ ಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದರು. ಇದರಿಂದ ಆಕ್ರೋಶಗೊಂಡ ಡಿಕೆಶಿ ಬೆಂಬಲಿಗರು ಅವರ ನಿವಾಸಕ್ಕೆ ಪೋಸ್ಟರ್ ಅಂಟಿಸಿದ್ದಾರೆ.

ಬೆಂಗಳೂರಿನ ಡಿಕೆಶಿ ಮನೆ ಪಕ್ಕದಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆಗಮಿಸಿದ್ದ ಡಿಕೆಶಿ ಬೆಂಬಲಿಗರು ಅವರ ಮನೆಗೆ ಪೋಸ್ಟರ್ ಅಂಟಿಸಿದ್ದಾರೆ. ಜೊತೆಗೆ ಜಾರಕಿಹೊಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇನ್ನೂ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಬಂದು ಪೋಸ್ಟರ್ ತೆರವು ಮಾಡಿದ್ದು ಜಾರಕಿಹೊಳಿ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!