ಸಾಹುಕಾರ್ ಗೆ ಮಹಿಳೆಯರ ಸವಾಲ್ ; ನಮ್ಮ ಮುಂದೆ ಬಂದು ಮಾತಾಡಲಿ ಉತ್ತರಿಸುತ್ತೇವೆ ಎಂದಿದ್ದು ಯಾಕೆ…?
ಬೆಳಗಾವಿ : ನಿಮ್ಮ ಶಾಪದಿಂದಲೇ ನನ್ನ ಮಗನಿಗೆ ಸೋಲಾಗಿದೆ ಎಂದೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಾನು ಯಾರಿಂದಾದರೂ ಹಣ ಪಡೆದಿದ್ದೇನಾ? ಎಂದು ಸಚಿವರು ಪ್ರಶ್ನಿಸುತ್ತಿದ್ದಂತೆ, ನಮ್ಮ ಮುಂದೆ ಬಂದು ಅವರು ಹೇಳಲಿ, ತಕ್ಕ ಉತ್ತರ ಕೊಡುತ್ತೇವೆ ಎಂದು ಕಾರ್ಯಕರ್ತೆಯರು ಅಬ್ಬರಿಸಿದರು.
ಬೆಳಗಾವಿಯಲ್ಲಿ ಶುಕ್ರವಾರ, ಅಂಗನವಾಡಿ ಶಿಕ್ಷಕರಿಗೆ ಮೊಬೈಲ್, ಸೀರೆ, ಮೆಡಿಸಿನ್ ಕಿಟ್, ವೇಯಿಂಗ್ ಮಷಿನ್ ಗಳನ್ನು ವಿತರಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.
ಚುನಾವಣೆ ವೇಳೆಯಲ್ಲಿ ನಾನು ಅಂಗನವಾಡಿ ಕಾರ್ಯಕರ್ತೆಯರಿಂದ ತಲಾ ಒಂದು ಲಕ್ಷ ರೂ.
ಸಂಗ್ರಹಿಸಿದ್ದೇನೆಂದೂ, ನಿಮ್ಮ ಶಾಪದಿಂದಲೇ ನನ್ನ ಮಗನಿಗೆ ಸೋಲಾಗಿದೆ ಎಂದೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಾನು ಯಾರಿಂದಾದರೂ ಹಣ ಪಡೆದಿದ್ದೇನಾ? ಎಂದು ಸಚಿವರು ಪ್ರಶ್ನಿಸುತ್ತಿದ್ದಂತೆ, ನಮ್ಮ ಮುಂದೆ ಬಂದು ಅವರು ಹೇಳಲಿ, ತಕ್ಕ ಉತ್ತರ ಕೊಡುತ್ತೇವೆ ಎಂದು ಕಾರ್ಯಕರ್ತೆಯರು ಅಬ್ಬರಿಸಿದರು.
ವೈರಿಗಳ ಕಡೆಯ ಅಸ್ತ್ರ ಆರೋಪ ಮಾಡುವುದು. ಅದಕ್ಕೆಲ್ಲ ಉತ್ತರ ಕೊಡುತ್ತ ಹೊದರೆ ಕೆಲಸ ಮಾಡಲು ಆಗುವುದಿಲ್ಲ. ಯಾರೇ ಆರೋಪ ಮಾಡಲಿ, ನಾವು ಶೃದ್ಧೆ, ಭಕ್ತಿಯಿಂದ ಕೆಲಸ ಮಾಡೋಣ.
ಇಲಾಖೆಯನ್ನು ಮಾದರಿಯನ್ನಾಗಿ ಮಾಡಲು ನಾನು ಕಂಕಣಬದ್ಧನಾಗಿದ್ದೇನೆ. ಅಂಗನವಾಡಿಗೆ ಕಳಪೆ ಆಹಾರ ಪದಾರ್ಥ ಪೂರೈಕೆಯಾದರೆ ಮುಲಾಜಿಲ್ಲದೆ ವಾಪಸ್ ಕಳಿಸಿ ಎಂದು ಅವರು ಸೂಚಿಸಿದರು.