
ರಮೇಶ್ ಜಾರಕಿಹೊಳಿ ಪರಿಸ್ಥಿತಿ ತಿಂದು ಎಸೆದ ಬಾಳೆ ಎಲೆಯಂತಾಗಿದೆ : ರಾಜ್ಯ ಕಾಂಗ್ರೆಸ್ ಟೀಕೆ

ಬೆಂಗಳೂರು : ಹತ್ತಿದ ಏಣಿಯನ್ನು ಒದೆಯುವುದು ಬಿಜೆಪಿ ಹಳೆಯ ಚಾಳಿ, ಆಪರೇಷನ್ ಕಮಲಕ್ಕೆ ಬಲಿಯಾದ ರಮೇಶ್ವಜಾರಕಿಜೊಳಿ ಪರಿಸ್ಥಿತಿ ತಿಂದು ಎಸೆದ ಬಾಳೆ ಎಲೆಯಂತಾಗಿದೆ ಎಂದು ಕಾಂಗ್ರೆಸ್ ಪೋಸ್ಟ್ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಸಮರ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿನ್ನೇ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ರಮೇಶ್ ಜಾರಕಿಹೊಳಿ ಕಾಲೆಳೆದಿದೆ.
ಸ್ವಂತ ಶಕ್ತಿಯ ಮೇಲೆ ಅಧಿಕಾರ ಹಿಡಿಯದೆ 2019 ರಲ್ಲಿ ಅನೈತಿಕ ಆಪರೇಷನ್ ಕಮಲದ ಹೆಸರಿನಲ್ಲಿ, ಸಮ್ಮಿಶ್ರ ಸರ್ಕಾರ ಕೆಡವಿ ಅಧಿಕಾರ ಅನುಭವಿಸಿದ ನಂತರ ಇಂದು ಬಿಜೆಪಿ ಶಾಸಕರನ್ನು ಕಾಲ ಕಸದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.