ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿ ವಿಚಾರ ಗಂಭೀರ ಚರ್ಚೆ ಮಧ್ಯೆ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ( Ramesh Jarakiholi ) ನಡೆ ಬಹಳಷ್ಟು ಚರ್ಚೆಯಾಗುತ್ತಿದೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( H D kumaraswami ) ಅವರ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾಗಿದ್ದ ರಮೇಶ್ ಜಾರಕಿಹೊಳಿ ಅವರು ಹೆಚ್ಡಿಕೆ ಭೇಟಿ ಮಾಡಿದ್ದು ಹಲವಾರು ರಾಜಕೀಯ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ ಹೆಚ್ ಡಿ ಕೆ ಅವರನ್ನು ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ವಿಚಾರ ಬಹುತೇಕ ಪೈನಲ್ ಆಗಿದ್ದು. ಸಧ್ಯ ಇಬ್ಬರ ಭೇಟಿ ಮಹತ್ವ ಪಡೆದಿದೆ.
ರಾಜ್ಯದಲ್ಲಿ ಈಗ ಇರುವ ಕೆಟ್ಟ ಸರ್ಕಾರವನ್ನು ತೆಗೆಯಲು ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ಒಳ್ಳೆಯದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಜೊತೆಗೆ ಸರ್ಕಾರದ ವಿರುದ್ಧ ಕೆಲ ಸಚಿವರು ಅಸಮಾಧಾನ ಹೊಂದಿದ್ದು ಇದರ ಲಾಭ ಪಡೆಯಲೂಬಹುದು.
ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ನಂತರ ಮತ್ತೆ ಸಾಹುಕಾರ್ ಆ್ಯಕ್ಟಿವ್ ಆಗಿದ್ದು ರಾಜಕೀಯ ವಲಯದಲ್ಲಿ ಸಂಚಲನ ಮೋಡಿಸಿದೆ. ಹಾಗೆಯೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ಆಹ್ವಾನಿಸಿರುವ ಸಾಹುಕಾರ್ ನಡೆ ಬಹಳಷ್ಟು ಕುತೂಹಲ ಕೆರಳಿಸಿದೆ.



