VIDEO : ಮಹಾ ನಾಯಕರ ಜೊತೆ ಗೋಕಾಕ್ ಸಾಹುಕಾರ್, ಇಲ್ಲಿದೆ ನೋಡಿ ವೀಡಿಯೋ
ಮಹಾರಾಷ್ಟ್ರ : ಮಹಾರಾಷ್ಟ್ರ ಸಿಎಂ ಆಗಿ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಿವ ಮುನ್ನ ಕರ್ನಾಟಕದಲ್ಲಿ ಬಿಜೆಪಿ ಸರಕಾರ ರಚನೆಗೆ ಪ್ರಮುಖ ಕಾರಣನಾದ ಗೋಕಾಕ ಸಾಹುಕಾರ್ ರಮೇಶ ಜಾರಕಿಹೊಳಿ ಏಕನಾಥ ಶಿಂಧೆಗೆ ಶುಭ ಹಾರೈಸಿದರು.
ಮುಂಬೈನಲ್ಲಿ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್ ಭೇಟಿಯಾದ ರಮೇಶ್ ಜಾರಕಿಹೊಳಿ, ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್‌ರನ್ನು ರಮೇಶ್ ಜಾರಕಿಹೊಳಿ ಭೇಟಿಯಾದ ವಿಡಿಯೋ ವೈರಲ್ ಆಗಿದೆ. ಕಳೆದ 12 ದಿನಗಳಿಂದ ಮುಂಬೈನಲ್ಲೇ ವಾಸ್ತವ್ಯ ಹೂಡಿದ್ದ ರಮೇಶ್ ಜಾರಕಿಹೊಳಿ, ಕರ್ನಾಟಕದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ, ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ರಾ ರಮೇಶ್ ಜಾರಕಿಹೊಳಿ ಎನ್ನುವ ಚರ್ಚೆ ಪ್ರಾರಂಭವಾಗಿದೆ.