VIDEO – ಥೂ…ಥೂ.. ಎಂದು ಸಾಹುಕಾರ್ ರಮೇಶ ಉಗಿದಿದ್ದು ಯಾರಿಗೆ ?
ಬೆಳಗಾವಿ : ಸ್ಥಳೀಯ ಸಂಘ ಸಂಸ್ಥೆಯ ವಿಧಾನ ಪರಿಷತ್ ಚುನಾವಣೆ ರಮೇಶ್ ಜಾರಕಿಹೊಳಿ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್ ನಡುವಡೆ ಹಣಾಹಣಿಯಾ ಎನ್ನುವ ಪ್ರಶ್ನೆಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಥೂ.. ಥೂ ಎಂದು ಉಗಿದರು.
ಮಂಗಳವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ನಾಮಪತ್ರ ಸಲ್ಲಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೊದಲ ಪ್ರಾಶಸ್ತ್ಯ ಮತದಲ್ಲಿ ಗೆಲವು ಸಾಧಿಸಲಿದ್ದಾರೆ ಎಂದ ಅವರು, ಈ ಚುನಾವಣೆ ರಮೇಶ ವರ್ಸಸ್ ಹೆಬ್ಬಾಳ್ಕರ್ ಚುನಾವಣೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಥೂ.. ಥೂ.. ಉಗಿದರು.
ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವುದೊಂದೆ ನಮ್ಮ ಗುರಿ.ಈ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ನಮ್ಮ ಅಭ್ಯರ್ಥಿ ಗೆಲವು ಮೊದಲ ಪ್ರಾಶಸ್ತ್ಯ ಮತದಲ್ಲಿಯೇ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾವು ಲಖನ್ ಜಾರಕಿಹೊಳಿಗೆ ಎರಡನೇ ಟಿಕೆಟ್ ಕೇಳುವಂತೆ ವರಿಷ್ಠರಲ್ಲಿ ಕೇಳಿಕೊಂಡಿಲ್ಲ. ನಮ್ಮ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದು ಪುನರುಚ್ಚರಿಸಿದರು.
ಮೊದಲ ಪ್ರಾಶಸ್ತ್ಯ ಮತದಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಬೇಕು. ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಸೋಲಬೇಕೆಂದು ಈಗಾಗಲೇ ಬಹಿರಂಗವಾಗಿ ಗೋಕಾಕನ ಸಮಾವೇಶದಲ್ಲಿ ಹೇಳಿದ್ದೇನೆ ಎಂದರು.